ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿ ಸಾವು

ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿ ಸಾವು

 


ದಾವಣಗೆರೆ: ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿ ಮೃತಪಟ್ಟ ಘಟನೆಯೊಂದು ಶುಕ್ರವಾರ ರಾತ್ರಿ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಸಂಭವಿಸಿದೆ.

ನಗರದ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಇಂದು ಗಣಿತ ಪರೀಕ್ಷೆ ಬರೆಯಬೇಕಾಗಿತ್ತು.

ಶುಕ್ರವಾರ ರಾತ್ರಿ ಮನೆಯ ಟೆರಸ್ ಮೇಲೆ ಓದುತ್ತಿದ್ದನು. 11.30ರ ಸಮಯದಲ್ಲಿ ಮಗ ಓದುತ್ತಿರುವುದನ್ನು ನೋಡಿ ಪೋಷಕರು ಮಲಗಿದ್ದರು.

ಬೆಳಗ್ಗೆ ಎದ್ದು ನೋಡಿದಾಗ ಮಿಥುನ್ ಟೆರಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವುದು ಕಂಡು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಮಿಥುನ್, ಸತೀಶ್ ಪಿಸಾಳೆ ದಂಪತಿಯ ಏಕೈಕ ಪುತ್ರನಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿರುವ ಮಗನ ಶವ ಕಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم