ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭಾರೀ ಮಳೆಗೆ ಧರೆಗುರುಳಿದ ಮರ

ಭಾರೀ ಮಳೆಗೆ ಧರೆಗುರುಳಿದ ಮರ

 


ಬೆಂಗಳೂರು: ನಗರದಲ್ಲಿ ಮಳೆ ಜೋರಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಚಾಮರಾಜಪೇಟೆಯಲ್ಲಿ ಮರ ಧರೆಗುರುಳಿದೆ. ರಾತ್ರಿ ಸುರಿದ ಮಳೆಗೆ ಇಡೀ ಬೆಂಗಳೂರು ತತ್ತರಿಸಿದ್ದು, ಬೆಂಗಳೂರಿನೆಲ್ಲೆಡೆ ರಾತ್ರಿ ಧಾರಾಕಾರ ಮಳೆ ಸುರಿದಿದೆ.

ರಸ್ತೆಗಳು ನದಿಯಂತಾಗಿ ವಾಹನ ಸವಾರರು ಪರದಾಡಿದ್ದು, ಮನೆಗಳಿಗೆ ನೀರು ನುಗ್ಗಿದೆ. ಉತ್ತರಹಳ್ಳಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, 10ಕ್ಕೂ ಅಧಿಕ ಮನೆಗಳಿಗೆ ನುಗ್ಗಿದೆ.

ಟಿವಿ, ಫ್ರಿಡ್ಜ್ ಸೇರಿದಂತೆ ಹಲವು ವಸ್ತುಗಳು ನೀರು ಪಾಲಾಗಿದ್ದು, ಚಾಮರಾಜ ಪೇಟೆಯಲ್ಲಿ ಬೃಹತ್​​ ಮರ ಧರೆಗುರುಳಿದೆ. ಹಲವೆಡೆ ಮಳೆ ಜೋರಾಗಿದೆ.


0 تعليقات

إرسال تعليق

Post a Comment (0)

أحدث أقدم