ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಸರಗೋಡು: ಶ್ರೀ ಲಕ್ಷ್ಮೀ ವೆಂಕಟೇಶ ವಿದ್ಯಾಲಯದಲ್ಲಿ ಪ್ರವೇಶಾತಿ ಆರಂಭ

ಕಾಸರಗೋಡು: ಶ್ರೀ ಲಕ್ಷ್ಮೀ ವೆಂಕಟೇಶ ವಿದ್ಯಾಲಯದಲ್ಲಿ ಪ್ರವೇಶಾತಿ ಆರಂಭ


ಕಾಸರಗೋಡು: ಕಾಸರಗೋಡಿನ ದ್ವಾರಕಾನಗರದ ಶ್ರೀ ಲಕ್ಷ್ಮೀ ವೆಂಕಟೇಶ ವಿದ್ಯಾಲಯದಲ್ಲಿ 2022-23ನೇ ಶೈಕ್ಷಣಿಕ ವರ್ಷದ ತರಗತಿಗಳಿಗೆ ಪ್ರವೇಶಾತಿ ಆರಂಭವಾಗಿದೆ.


ಪ್ರಿ-ಕೆಜಿ ಮತ್ತು ಎಲ್‌ಕೆಜಿಯಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ಇಲ್ಲಿ 'ಪಂಚಾಂಗ ಶಿಕ್ಷಣ' (ಪ್ರಾಥಮಿಕ ಶಿಕ್ಷಣ) ವನ್ನು ಸಂಪೂರ್ಣ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ನೀಡಲಾಗುತ್ತಿದೆ.


ಎಲ್ಲ ತರಗತಿಗಳಿಗೂ ಯೋಗ, ಸಂಗೀತ, ಸಂಸ್ಕೃತ, ದೈಹಿಕ ಶಿಕ್ಷಣ (ಕ್ರೀಡಾ ಚಟುವಟಿಕೆಗಳು), ನೈತಿಕ ಹಾಗೂ ಆಧ್ಯಾತ್ಮಿಕ ಶಿಕ್ಷಣವನ್ನು ಮೌಲ್ಯಾಧಾರಿತ ಶಿಕ್ಷಣದ ನೀತಿಯಡಿ ಒದಗಿಸಲಾಗುತ್ತಿದೆ. 


ಮಕ್ಕಳಲ್ಲಿ ಮಾನವೀಯ ಮೌಲ್ಯಗಳು ಮತ್ತು ರಾಷ್ಟ್ರೀಯತೆಯನ್ನು ಬೆಳೆಸಲು  ಎಳವೆಯಲ್ಲೇ ಭಾರತೀಯ ಸನಾತನ ಪರಂಪರೆಯ ಮೌಲ್ಯಗಳನ್ನು ಆಧರಿಸಿ ಶಿಕ್ಷಣ ನೀಡುವುದು ಇಂದಿನ ತುರ್ತು ಅಗತ್ಯವಾಗಿದ್ದು, ಶ್ರೀ ಲಕ್ಷ್ಮೀ ವೆಂಕಟೇಶ ವಿದ್ಯಾಲಯ ಹಲವು ವರ್ಷಗಳಿಂದ ಈ ಕಾರ್ಯದಲ್ಲಿ ತೊಡಗಿಕೊಂಡಿದೆ.


ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಎನ್‌ಐಓಎಸ್‌ ವಿಭಾಗದ ಮಾನ್ಯತೆ ಪಡೆದಿರುವ ಈ ವಿದ್ಯಾಲಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಹೆತ್ತವರ ಪಾಲಿಗೆ ಹೆಮ್ಮೆಯ ವಿಷಯವಾಗಿದೆ.


ಆಸಕ್ತ ಪೋಷಕರು ತಮ್ಮ ಮಕ್ಕಳನ್ನು ಕಾಸರಗೋಡಿನ ಹೆಮ್ಮೆಯ ಈ ಶಿಕ್ಷಣ ಸಂಸ್ಥೆಗೆ ದಾಖಲಿಸಲು 9633310938,  7994676358 ಸಂಖ್ಯೆಗಳಿಗೆ ಸಂಪರ್ಕಿಸಿ ಹೆಚ್ಚಿನ ವಿವರ ತಿಳಿದುಕೊಳ್ಳಬಹುದು. ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10:30ರಿಂದ ಮಧ್ಯಾಹ್ನ 1:30ರ ವರೆಗೆ ಶಾಲಾ ಕಚೇರಿಗೆ ಭೇಟಿ ನೀಡಬಹುದಾಗಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




0 Comments

Post a Comment

Post a Comment (0)

Previous Post Next Post