ನಿಡ್ಡೋಡಿ: ಜ್ಞಾನ ರತ್ನ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ) ನಿಡ್ಡೋಡಿಯ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ಏ.14) ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಸಮಾರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸುವುದರ ಮೂಲಕ ವಂದನೆಗಳನ್ನು ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಯಾದ ಕೆ ರಾಘವೇಂದ್ರ ಭಟ್, ಶಾಲಾ ಪ್ರಾಂಶುಪಾಲೆ ಶ್ರೀಮತಿ ದಿವ್ಯ ಎಸ್ ನಾಯಕ್, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಮಾರಂಭದ ಕೊನೆಯಲ್ಲಿ ಸಿಹಿಯನ್ನು ಹಂಚಲಾಯಿತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment