ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಬುಧವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ರಾಮಚಂದ್ರ ಭಟ್, ಉಪಪ್ರಾಚಾರ್ಯ ಗಣೇಶ್ ಪ್ರಸಾದ್, ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯ ಪ್ರಾಚಾರ್ಯೆ ಮಾಲತಿ ಡಿ, ವಿದ್ಯಾಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿ ಸಮೂಹ, ಹೆತ್ತವರು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಹಾಜರಿದ್ದರು.
‘ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ನಮ್ಮ ಕ್ಯಾಂಪಸ್‍ಗೆ ಆಗಮಿಸಿರುವುದರಿಂದ ನಾವೆಲ್ಲರೂ ಧನ್ಯರಾಗಿದ್ದೇವೆ. ನಮ್ಮ ಕ್ಯಾಂಪಸ್‍ನ ಕಣ ಕಣಗಳೂ ಪವಿತ್ರವೆನಿಸಿವೆ. ದೇವರ ಪೂಜೆಯ ಅವಕಾಶ ನಮ್ಮ ಆವರಣದೊಳಗೆ ದೊರಕುವಂತಾದದ್ದು ನಮ್ಮೆಲ್ಲರ ಪುಣ್ಯವೇ ಸರಿ’ ಎಂಬುದು ಸಂಸ್ಥೆಯ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ನಟ್ಟೋಜ ಅವರ ಮಾತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق