ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಶಾಂಭವಿ ಹೋಟೆಲ್ ನಲ್ಲಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಮಂಗಳೂರು ಕೊಣಾಜೆಯ ಶರಣ್ ರಾಜ್ (31) ಎಂದು ಗುರುತಿಸಲಾಗಿದೆ.
ಇವರು ನಿನ್ನೆ ರಾತ್ರಿ ಶಾಂಭವಿ ಲಾಡ್ಜಿನ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದ್ದು, ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂದು ತಿಳಿದುಬಂದಿದೆ.
ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق