ಮಂಗಳೂರು: ಖಾಸಗಿ ಎಕ್ಸ್ ಪ್ರೆಸ್ ಬಸ್ ಹಾಗೂ ಓಮಿನಿ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆಯೊಂದು ಮುಲ್ಕಿ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ವಸಂತ (64), ಭುಜಂಗ (62) ಎಂದು ಗುರುತಿಸಲಾಗಿದೆ.
ಓಮ್ನಿಯಲ್ಲಿದ್ದವರು ಹಳೆಯಂಗಡಿ ಪೇಟೆ ಒಳ ರಸ್ತೆಯಾಗಿ ಪಾವಂಜೆ ಜಂಕ್ಷನ್ ಗೆ ಬರುತ್ತಿದ್ದು ಬಸ್ ಉಡುಪಿ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದ ವಸಂತ ಮತ್ತು ಭುಜಂಗ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment