ಅಕೋಲಾ (ಮಹಾರಾಷ್ಟ್ರ): ಬಸ್ ಗೆ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿರುವ ಘಟನೆಯೊಂದು ವಾಶಿಮ್ ನ ಅಕೋಲಾ ನಾಕಾ ಪ್ರದೇಶದ ಹೋಟೆಲ್ ಈವೆಂಟ್ಸ್ ಬಳಿ ಗುರುವಾರ ಬೆಳಿಗ್ಗೆ ಅಪಘಾತ ಸಂಭವಿಸಿದೆ.
ಪುಣೆಯಿಂದ ಯವತ್ಮಾಲ್ ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಸಮೃದ್ಧಿ ಹೆದ್ದಾರಿಯಲ್ಲಿ ನೀರಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ.
ನೀರಿನ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.
ಟ್ಯಾಂಕರ್ ನ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಏಳು ಜನರು ಗಾಯಗೊಂಡಿದ್ದಾರೆ.
ನೀರಿನ ಟ್ಯಾಂಕರ್ ನಲ್ಲಿದ್ದ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಗಾಯಗೊಂಡ 7 ರಿಂದ 8 ಜನರನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಾಶಿಮ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಕೋಲಾಗೆ ಸ್ಥಳಾಂತರ ಮಾಡಲಾಗುತ್ತಿದೆ.
Post a Comment