ತುಮಕೂರು: ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆಯೊಂದು ನಡೆದಿದೆ.
ಇಂದು ಬೆಳಗಿನ ಜಾವ 3.50 ರ ಸುಮಾರಿಗೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ಸಂಭವಿಸಿದೆ. ಹಿಂಬದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق