ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಾರ್ಟಿ ವೇಳೆ ಸಿಸಿಬಿ ದಾಳಿ; ಯುವಕರು ಯುವತಿಯರು ಪೋಲಿಸ್ ವಶ

ಪಾರ್ಟಿ ವೇಳೆ ಸಿಸಿಬಿ ದಾಳಿ; ಯುವಕರು ಯುವತಿಯರು ಪೋಲಿಸ್ ವಶ

 


ಬೆಂಗಳೂರು: ಬೆಂಗಳೂರಿನಲ್ಲಿ ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಾರತಹಳ್ಳಿ ಔಟರ್ ರಿಂಗ್ ರಸ್ತೆಯ ಹೋಟೆಲ್ ಮೇಲೆ ದಾಳಿ ನಡೆಸಲಾಗಿದೆ.

ಐಷಾರಾಮಿ ಹೋಟೆಲ್ ನಲ್ಲಿ ಭರ್ಜರಿ ಪಾರ್ಟಿ ನಡೆಯುತ್ತಿತ್ತು. ಬೆಳಗಿನ ಜಾವ 3.30 ರವರೆಗೂ ಪಾರ್ಟಿ ನಡೆಯುತ್ತಿದ್ದು, ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಇದನ್ನು ಆಯೋಜಿಸಿದ್ದ. ದಾಳಿಯ ವೇಳೆ 64 ಯುವಕರು ಮತ್ತು 24 ಯುವತಿಯರು ಪತ್ತೆಯಾಗಿದ್ದಾರೆ.

ಪಾರ್ಟಿಯಲ್ಲಿ ಉತ್ತರ ಭಾರತದ ಮೂಲದ ಯುವತಿಯರು ಹೆಚ್ಚಾಗಿದ್ದು, ಡ್ರಗ್ಸ್ ಸೇವಿಸಿ ಪಾರ್ಟಿ ಮಾಡಿರುವ ಅನುಮಾನದ ಹಿನ್ನೆಲೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

ಹೆಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ದಾಳಿಯ ವೇಳೆ ಸಿಸಿಬಿ ಅಧಿಕಾರಿಗಳೊಂದಿಗೆ ಆರೋಪಿಗಳು ವಾಗ್ವಾದ ನಡೆಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم