ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರು ಮತ್ತು ಬೈಕ್ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಕಾರು ಮತ್ತು ಬೈಕ್ ಅಪಘಾತ; ಇಬ್ಬರಿಗೆ ಗಂಭೀರ ಗಾಯ

 


ಆನೇಕಲ್: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆಯೊಂದು ಆನೇಕಲ್ ನಲ್ಲಿ ನಡೆದಿದೆ.

ಮುತ್ಯಾಲಮಡುವು ಕ್ರಾಸ್ ಬಳಿ ಘಟನೆ ನಡೆದಿದ್ದು, ದ್ವಿಚಕ್ರ ವಾಹನದಲ್ಲಿದ್ದ ನಾಗರಾಜು ಹಾಗು ಅಶ್ವತ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ನಲ್ಲಿದ್ದವರಿಗೆ ತಮಿಳುನಾಡು ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಅಗಲೀಕರಣ ಮಾಡಿದಾಗ ನಾಮಫಲಕಗಳನ್ನು ಹಾಕದಿರುವುದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರ ಆರೋಪಿಸಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم