ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ.23 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಏ.23 ರ ಶನಿವಾರ ಬೆ.10ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ (ಹೆಲಿಕಾಪ್ಟರ್ ಮೂಲಕ) ದಿಂದ ಹೊರಟು 10.45ಕ್ಕೆ ದಾವಣಗೆರೆ ಜಿಎಂಐಟಿ ಹೆಲಿಪ್ಯಾಡ್‍ಗೆ ಅಗಮಿಸುವರು.
ಬೆ.11.15ಕ್ಕೆ ಜಿಎಂಐಟಿ ಹೆಲಿಪ್ಯಾಡ್‍ನಿಂದ (ರಸ್ತೆಯ ಮೂಲಕ) ಹೊರಟು ಬೆ.11.30ಕ್ಕೆ ಶ್ರೀ ಪಂಚಮಶಾಲಿ ಜಗದ್ಗುರು ಪೀಠ ಹರಕ್ಷೇತ್ರ ಹರಿಹರ ವತಿಯಿಂದ ಆಯೋಜಿಸಿರುವ ಬೃಹತ್ ಉದ್ಯೋಗ ಮೇಳ ಮತ್ತು ರಾಷ್ಟ್ರೀಯ ಶಿಕ್ಷಣ - ಕೌಶಲ್ಯ ಮತ್ತು ಕೃಷಿ ಸಮಾವೇಶ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು.
ಮ.01.30ಕ್ಕೆ ಶ್ರೀ ಪಂಚಮಶಾಲಿ ಗುರುಪೀಠದಿಂದ ಹೊರಟು ಜಿಎಂಐಟಿ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
إرسال تعليق