ವಿಜಯನಗರ: ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತನೊಬ್ಬ ಸಾವನ್ನಪ್ಪಿದ ಘಟನೆಯೊಂದು ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ.
ಗುರುವಾರದಂದು ಗ್ರಾಮದಲ್ಲಿ ನಾರದಮುನಿ ರಥೋತ್ಸವ ನಡೆದಿದ್ದು, ಈ ವೇಳೆ ದಾವಣಗೆರೆಯ 45 ವರ್ಷದ ಸುರೇಶ್ ಬಸವನಗೌಡ ತೇರಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಭಕ್ತರು ಆತಂಕಕ್ಕೆ ಒಳಗಾಗಿದ್ದು, ಬಳಿಕ ಪೊಲೀಸರು ಶವ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق