ಬೆಂಗಳೂರು : ಬೆಂಗಳೂರಿನಲ್ಲಿ ಭಾರೀ ಮಳೆಗೆ ಯುವಕ ಮೃತಪಟ್ಟ ಘಟನೆಯೊಂದು ನಿನ್ನೆ (ಸೋಮವಾರ) ನಡೆದಿದೆ. ಭಾರೀ ಮಳೆಗೆ ಬೈಕ್ ಸ್ಕಿಡ್ ಆಗಿದ್ದು, ಕಾರ್ಪೋರೇಷನ್‌ನ ಪವಿತ್ರ ಟಾಕೀಸ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ಮತ್ತೊಬ್ಬ ಯುವಕನಿಗೆ ಗಂಭೀರವಾದ ಗಾಯಗಳಾಗಿವೆ.
ಗಾಯಗೊಂಡ ಯುವಕನನ್ನು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಳೆಯ ಅವಾಂತರದಿಂದ ಯುವಕ ಬಲಿಯಾಗಿದ್ದಾನೆ.
ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿಗೆ ಸಿಲುಕಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿ, ಮತ್ತೊಬ್ಬ ಯುವಕ ಗಾಯಗೊಂಡಿದ್ದಾನೆ.
ಈ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق