ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯುತ್ ಅಪಘಾತ; ಸಹೋದರರಿಬ್ಬರು ಸಾವು

ವಿದ್ಯುತ್ ಅಪಘಾತ; ಸಹೋದರರಿಬ್ಬರು ಸಾವು

 


ವಿಜಯಪುರ: ತೋಟದ ಬಾವಿಯ ಮೋಟಾರ್ ಆನ್ ಮಾಡಲು ಹೋದಾಗ ವಿದ್ಯುತ್ ಆಘಾತಕ್ಕೊಳಗಾಗಿ ಸಹೋದರರಿಬ್ಬರು ಮೃತಪಟ್ಟ ಘಟನೆಯೊಂದು ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಮೃತರನ್ನು ಮುದ್ದುಗೌಡ ಅಪ್ಪಾ ಸಾಹೇಬ್ ಪಾಟೀಲ್(20) ಹಾಗೂ ಶಿವರಾಜ್ ಅಪ್ಪಾ ಸಾಹೇಬ್ ಪಾಟೀಲ್(18) ಎಂದು ಗುರುತಿಸಲಾಗಿದೆ.

ಇವರಿಬ್ಬರು ತೋಟದ ಬಾವಿಯ ಬಳಿ ನೀರಿನ ಮೋಟಾರ್ ಆನ್ ಮಾಡಲೆಂದು ನಿನ್ನೆ ಸಂಜೆ ತೆರಳಿದ್ದರು.

ಅಣ್ಣ ಮುದ್ದುಗೌಡ ಮೋಟಾರ್ ಆನ್ ಮಾಡಲು ಹೋದಾಗ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ. ಇದನ್ನು ಗಮನಿಸಿದ ತಮ್ಮ ಶಿವರಾಜ್‌ ಅಣ್ಣನ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಅವರು ಕೂಡಾ ವಿದ್ಯುತ್ ಆಘಾತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم