ಕಲಬುರಗಿ: ತಾಲ್ಲೂಕಿನ ಐನೋಳ್ಳಿ ಗ್ರಾಮದಲ್ಲಿ ಲೈನ್ ಮೆನ್ ಗಳಿಬ್ಬರು ವಿದ್ಯುತ್ ತಂತಿ ದುರಸ್ತಿ ಕಾರ್ಯದಲ್ಲಿದ್ದಾಗ ವಿದ್ಯುತ್ ಸ್ಪರ್ಶದಿಂದ ಗಂಭೀರ ಗಾಯಗೊಂಡಿರುವ ಘಟನೆಯೊಂದು ನಡೆದಿದೆ.
ಐನೋಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ವಿದ್ಯುತ್ ತಂತಿ ಸರಿಪಡಿಸುವ ವೇಳೆ ಒಮ್ಮೇಲೆ ವಿದ್ಯುತ್ ಶಾಕ್ ನಿಂದ ಲೈನ್ ಮೆನ್ ಗಳಾದ ಸದ್ದಾಂ, ಹೆಲ್ಪರ್ ಹಾರುನ್ ಖಾನ್ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ತಕ್ಷಣ ಇಬ್ಬರನ್ನು ಚಿಂಚೋಳಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
Post a Comment