ಶಿವಮೊಗ್ಗ: ಸಾಲಬಾಧೆಗೆ ಹೆದರಿ ಯುವ ರೈತ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ನಡೆದಿದೆ.
ಬಸವಾಪುರ ಗ್ರಾಮದ ವಸಂತ (34) ಮೃತ ದುರ್ದೈವಿ. ವಸಂತ ಸಂಘ-ಸಂಸ್ಥೆ ಹಾಗೂ ಖಾಸಗಿಯಾಗಿ ಸುಮಾರು 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಕಳೆದ ಐದು ವರ್ಷದಿಂದ ಗೇಣಿ ಜಮೀನಿನಲ್ಲಿ ಶುಂಠಿ ಬೆಳೆಯುತ್ತಿದ್ದ.
ಇದೀಗ ಶುಂಠಿ ಧಾರಣೆಯಲ್ಲಿ ಕುಸಿತ ಕಂಡಿದ್ದರಿಂದ ಸಾಲಕ್ಕೆ ಹೆದರಿ ರಿಪ್ಪನ್ಪೇಟೆ ಸಮೀಪದ ಹಿಂಡ್ಲೇಮನೆ ರಸ್ತೆಯ ಪಕ್ಕದ ಕಾಡಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಬಗ್ಗೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق