ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಚಲನಚಿತ್ರ ನಿರ್ಮಾಪಕ ಪತ್ತಿಕೊಂಡ ಕುಮಾರಸ್ವಾಮಿಯವರಿಗೆ ಸನ್ಮಾನ

ಹಿರಿಯ ಚಲನಚಿತ್ರ ನಿರ್ಮಾಪಕ ಪತ್ತಿಕೊಂಡ ಕುಮಾರಸ್ವಾಮಿಯವರಿಗೆ ಸನ್ಮಾನ


ಬೆಂಗಳೂರು: ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಹಲವಾರು ಸದಭಿರುಚಿಯ ಚಲನಚಿತ್ರಗಳನ್ನು ನಿರ್ಮಾಣ ಮಾಡಿರುವ ಹಿರಿಯ ಚಲನಚಿತ್ರ ನಿರ್ಮಾಪಕ ಹೊಸಪೇಟೆಯ ಪತ್ತಿಕೊಂಡ ಕುಮಾರಸ್ವಾಮಿರವರು ಭಾರತ ಸರ್ಕಾರದ ನೀತಿ ಆಯೋಗದಿಂದ ಮಾನ್ಯತೆ ಪಡೆದ ಬೆಂಗಳೂರಿನ ಗ್ಲೋಬಲ್ ವರ್ಚುಯಲ್ ಅಕಾಡೆಮಿ ಫಾರ್ ಪೀಸ್ ಅಂಡ್ ಎಜುಕೇಷನ್ ವತಿಯಿಂದ ಗೌರವ ಡಾಕ್ಟರೇಟ್ ಪುರಸ್ಕಾರ ಪಡೆದ ಹಿನ್ನೆಲೆಯಲ್ಲಿ ನಗರದ ವಾಸವಿ ಪೀಠದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮಿಜಿ ರವರು ಸನ್ಮಾನಿಸಿದರು.


ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ, ಕಲಬುರಗಿ ವಿಕಾಸ ಅಕಾಡೆಮಿಯ ಪ್ರವಾಸೋದ್ಯಮ ವಿಭಾಗದ ಸಲಹೆಗಾರ ಡಾ.ವಾಸುದೇವ ಅಗ್ನಿಹೋತ್ರಿ, ಕರ್ನಾಟಕ ಚಲನಚಿತ್ರ ನಿರ್ಮಾಪಕ ಸಂಘದ ಉಪಾಧ್ಯಕ್ಷ ಉಮೇಶ್ ಬಣಕಾರ್, ನಿರ್ಮಾಪಕ ಪತ್ತಿಕೊಂಡ ಕಿಶೋರ್(ಜೇಮ್ಸ್ ಖ್ಯಾತಿ), ನಿರ್ದೇಶಕ ಡಾ.ಮಧುಸೂದನ ಹವಲ್ದಾರ್ ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

0 تعليقات

إرسال تعليق

Post a Comment (0)

أحدث أقدم