ಸಿಂಗರ್ ಪುರ: ಅಪಘಾತವಾದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಈ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡ ಘಟನೆಯೊಂದು ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆದಿದೆ.
ಗುರುವಾರ ರಾತ್ರಿ ರಾಜನಂದಗಾಂವ್-ಖೈರಗಡ ರಸ್ತೆಯ ತೆಲ್ಕಡಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗರ್‌ಪುರ ಗ್ರಾಮದ ಗಣೇಶ ದೇವಸ್ಥಾನದ ಬಳಿಯ ಮೋರಿಯಲ್ಲಿ ಕಾರೊಂದು ಅಪಘಾತಕ್ಕೀಡಾಗಿತ್ತು.
ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ತಕ್ಷಣವೇ ಘಟನಾ ಸ್ಥಳಕ್ಕೆ ಬಂದಿದ್ದು, ಘಟನೆಯ ಕುರಿತು ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ತನಿಖೆ ನಡೆಸುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾದೇವ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق