ಬೆಳ್ತಂಗಡಿ: ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸೇವೆಗಾಗಿ ಶನಿವಾರ ದಂದು ಅವರಿಗೆ ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕಾರ ಹೇಮಾವತಿ ಹೆಗ್ಗಡೆಯವರು ಪಡೆದರು.
ಧರ್ಮಸ್ಥಳದಲ್ಲಿ ಕ್ಷೇತ್ರದ ನೌಕರ ವೃಂದದವರು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಊರಿನ ನಾಗರಿಕರು ಗೌರವಪೂರ್ವಕ ಸ್ವಾಗತ ಕೋರಿ ಅಭಿನಂದನೆ ಅರ್ಪಿಸಿದರು.
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಿಂದ ಬೀಡಿನ ವರೆಗೆ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment