ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹೆಚ್ಚಿದ ಗ್ಯಾಸ್ ಉರಿ: ಸಿಲಿಂಡರ್ ಬೆಲೆಯಲ್ಲಿ 250 ರೂ ಹೆಚ್ಚಳ

ಹೆಚ್ಚಿದ ಗ್ಯಾಸ್ ಉರಿ: ಸಿಲಿಂಡರ್ ಬೆಲೆಯಲ್ಲಿ 250 ರೂ ಹೆಚ್ಚಳ

 


ನವದೆಹಲಿ: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಶುಕ್ರವಾರದಿಂದಲೇ ಜಾರಿಗೆ ಬರಲಿದೆ. 

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡು ಬಂದಿಲ್ಲ.

ಆದರೆ, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ಹೆಚ್ಚುವರಿ ಸೇರಿದಂತೆ 2,253 ರೂ. ಪಾವತಿ ಮಾಡಬೇಕಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 105 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಏರಿಕೆಯಾಗಿದೆ.

ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯವಾದ ಹೆಚ್ಚಳ ಕಂಡು ಬರುತ್ತಿರುವ ಕಾರಣ ಅನಿಲ ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಅಡುಗೆ ಅನಿಲ ದರದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.


hit counter

0 تعليقات

إرسال تعليق

Post a Comment (0)

أحدث أقدم