ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಸಿಯೂಟ ತಯಾರಕರು ಮತ್ತು ಸಹಾಯಕರಿಗೆ ಗೌರವಧನ ಹೆಚ್ಚಳ

ಬಿಸಿಯೂಟ ತಯಾರಕರು ಮತ್ತು ಸಹಾಯಕರಿಗೆ ಗೌರವಧನ ಹೆಚ್ಚಳ

 


ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಮತ್ತು ಸಹಾಯಕರ ಗೌರವಧನವನ್ನು 1000 ರೂ. ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಮುಖ್ಯ ಅಡುಗೆಯವರಿಗೆ 3700 ರೂಪಾಯಿ, ಅಡುಗೆ ಸಹಾಯಕರಿಗೆ 3600 ರೂಪಾಯಿ ಗೌರವಧನ ನೀಡಲಾಗುವುದು.

ಇದರಿಂದ 1.18 ಲಕ್ಷ ಕಾರ್ಯಕರ್ತೆಯರಿಗೆ ಅನುಕೂಲವಾಗಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭದಿಂದಲೇ ಬಿಸಿಯೂಟ ಕಾರ್ಯಕರ್ತರ ಗೌರವಧನ 1000 ರೂ. ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.


hit counter

0 تعليقات

إرسال تعليق

Post a Comment (0)

أحدث أقدم