ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎದೆನೋವಿಗೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.
ತಜ್ಞ ವೈದ್ಯರಿಂದ ಪ್ರಭಾಕರ್ ಭಟ್ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರಿಂದ ಮಾಹಿತಿ ಲಭಿಸಿದೆ.
ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ಸಂಜೆಯ ಸುಮಾರಿಗೆ ಎದೆನೋವು ಉಂಟಾಗಿದೆ. ಹೀಗಾಗಿ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಚೇತರಿಸಿಕೊಂಡಿದ್ದು, ಯಾರೂ ಗಾಬರಿಗೆ ಒಳಗಾಗುವುದು ಬೇಡ ಎಂದು ಆಪ್ತ ವಲಯಗಳು ತಿಳಿಸಿವೆ. ಸದ್ಯ ಭಟ್ ಅವರ ಆರೋಗ್ಯ ಸ್ಥಿರವಾಗಿದ್ದು, ಆಂಜಿಯೋಗ್ರಾಮ್ ಮಾಡಲು ವೈದ್ಯರು ಸೂಚಿಸಿದ್ದಾರೆ. ಅವರ ಅರೋಗ್ಯದ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಸಿಗಬೇಕಿದೆ.
Post a Comment