ಶ್ರೀರಂಗಪಟ್ಟಣ: ಕಲ್ಲುತುಂಬಿದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಪಾಂಡವಪುರ ತಾಲೂಕಿನ ಹರವು ಗ್ರಾಮದ ಸುಮತಿ (28) ಮೃತ ದುರ್ದೈವಿ.
ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಸಮೀಪವಿರುವ ಹಳೆ ಸಂತೇಮಾಳದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೃತ ಸುಮತಿ ಮೈಸೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಕೆಲಸಕ್ಕೆ ತೆರಳುವ ವೇಳೆ ದುರ್ಘಟನೆ ನಡೆದಿದೆ.
ಈ ಬಗ್ಗೆ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment