ಮಂಗಳೂರು: ಮಹಾನಗರ ಪಾಲಿಕೆಯ ಸೆಂಟ್ರಲ್ ವಾರ್ಡಿನ ಯೇನಪೊಯ ಆಸ್ಪತ್ರೆಯ ಹಿಂಬದಿ 50 ಲಕ್ಷ ವೆಚ್ಚದಲ್ಲಿ ರಾಜಕಾಲುವೆಯ ತಡೆಗೋಡೆ ಹಾಗೂ ಅಭಿವೃದ್ದಿ ಕಾಮಗಾರಿಗೆ ಶಾಸಕರಾದ ವೇದವ್ಯಾಸ ಕಾಮತ್ ಭೂಮಿಪೂಜೆಯನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಮಂಗಳೂರು ನಗರದ ರಾಜಕಾಲುವೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಕೆಲವೆಡೆ ಕಾಮಗಾರಿ ಪ್ರಗತಿಯಲ್ಲಿದೆ. ಯೆನೆಪೋಯ ಆಸ್ಪತ್ರೆಯ ಹಿಂಭಾಗದ ರಾಜಕಾಲುವೆಯ ತಡೆಗೋಡೆ ಹಾಗೂ ಅಭಿವೃದ್ಧಿಗೆ 50 ಲಕ್ಷ ಬಿಡುಗಡೆಗೊಳಿಸಿದ್ದು ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಮುಖ್ಯಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ ಎಂ, ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಗಳಾದ ಅಡಿಗ ಬಾಲಕೃಷ್ಣ ಶೆಣೈ, ಕಿರಣ್ ಪೈ, ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ಶಕ್ತಿಕೇಂದ್ರ ಅಧ್ಯಕ್ಷರು ಮುರಳೀಧರ್ ನಾಯಕ್, ಮಂಡಲದ ಉಪಾಧ್ಯಕ್ಷರಾದ ರಮೇಶ್ ಹೆಗ್ಡೆ, ಹಾಗೂ ವಾರ್ಡಿನ ಪ್ರಮುಖರಾದ ಸೌಮ್ಯ ರೈ, ಭರತ್ ನಾಗರ್ ಮಟ್, ಗಿರೀಶ್ ಕುಮಾರ್, ಪಿಸಿ ಗುರು, ಮಂಜುಳಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق