ಮಂಗಳೂರು: 1 ಕೋಟಿ ರೂಪಾಯಿ ಅನುದಾನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ವೈಯವರು ಗುದ್ದಲಿಪೂಜೆ ನೆರವೇರಿಸಿದರು.
25 ಲಕ್ಷ ರೂ ವೆಚ್ಚದಲ್ಲಿ ಕುದ್ರಾಡಿ ಮುಖ್ಯ ರಸ್ತೆಯ ಕಾಂಕ್ರೀಟಿಕರಣ, 40 ಲಕ್ಷ ರೂಪಾಯಿ ವೆಚ್ಚದಲ್ಲಿ ಮಾಲಾಡಿ ಕೋರ್ಟ್ ನ ಮುಖ್ಯ ರಸ್ತೆಯ ಕಾಂಕ್ರೀಟಿಕರಣ ಹಾಗೂ 35 ಲಕ್ಷ ರೂಪಾಯಿ ವೆಚ್ಚದಲ್ಲಿ ಎಜೆ ಆಸ್ಪತ್ರೆಯ ಬಳಿ ಸಾರ್ವಜನಿಕ ರಸ್ತೆಗೆ ತಡೆಗೋಡೆ ನಿರ್ಮಾಣಕ್ಕೆ ಶಾಸಕರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಸ್ಥಳೀಯ ಕಾರ್ಪೋರೇಟರ್ ರಂಜನಿ ಕೋಟ್ಯಾನ್,ಯುವ ನಾಯಕ ಚರಿತ್ ಕುಮಾರ್, ಬೂತ್ ನ ಅಧ್ಯಕ್ಷರಾದ ಗಣೇಶ್, ಕಾರ್ಯದರ್ಶಿ ಪ್ರಶಾಂತ್, ಮಾಜಿ ಕಾರ್ಪೊರೇಟರ್ ರಾಜೇಶ್, ಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಘವೇಂದ್ರ ಉಡುಪ, ವಸಂತ್ ಮಾಲೆಮರ್, ಪಕ್ಷದ ಪ್ರಮುಖ ಕಾರ್ಯಕರ್ತರಾದ ನವನೀತ್, ಮಂಜುನಾಥ್, ಪ್ರಸಾದ್ ಮಾಲಾಡಿ, ರಾಜಗುರು ಮಾಲಾಡಿ ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment