ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಟೇಟ್‌ ಬ್ಯಾಂಕ್‌ ಬಸ್‌ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ವೇದವ್ಯಾಸ ಕಾಮತ್

ಸ್ಟೇಟ್‌ ಬ್ಯಾಂಕ್‌ ಬಸ್‌ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ವೇದವ್ಯಾಸ ಕಾಮತ್


ಮಂಗಳೂರು: 4.20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸ್ಟೇಟ್ ಬ್ಯಾಂಕ್ ಸರ್ವೀಸ್ ಬಸ್ಟ್ ನಿಲ್ದಾಣಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದ ಹೃದಯ ಭಾಗದಲ್ಲಿರುವ ಸರ್ವೀಸ್ ಬಸ್ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಸ್ಮಾರ್ಟ್ ಸಿಟಿ ಯೋಜನೆಯಿಂದ 2.20 ಕೋಟಿ, ಮಂಗಳೂರು ಮಹಾನಗರ ಪಾಲಿಕೆಯಿಂದ 1 ಕೋಟಿ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 1 ಕೋಟಿ ಬಿಡುಗಡೆಗೊಳಿಸಲಾಗಿದೆ. ಒಟ್ಟು 4.20 ಕೋಟಿ ಅನುದಾನದಲ್ಲಿ ಬಸ್ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.


ಅಭಿವೃದ್ಧಿ ಹೊಂದುತ್ತಿರುವ ಮಂಗಳೂರು ನಗರಕ್ಕೆ ಸುಸಜ್ಜಿತವಾದ ಸರ್ವೀಸ್ ಬಸ್ ನಿಲ್ದಾಣವೂ ಅಗತ್ಯವಿದೆ. ಮಂಗಳೂರು ನಗರವು ಅಭಿವೃದ್ಧಿ ಹೊಂದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರ, ಸಂಸದರಾದ ನಳಿನ್  ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ ಕಾಮಗಾರಿ ನಡೆಯುತ್ತಿದೆ. ಸಾರ್ವಜನಿಕರ ಸಹಕಾರದೊಂದಿಗೆ ನಗರದ ಅಭಿವೃದ್ದಿಗೆ ಮತ್ತಷ್ಟು ಶ್ರಮ ವಹಿಸಲಾಗುವುದು ಎಂದರು.


ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ಹಾಗೂ ಸ್ಥಳೀಯ ಕಾರ್ಪೋರೆಟರ್ ದಿವಾಕರ್ ಪಾಂಡೇಶ್ವರ, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಪ್ರಸಾದ್ ಬೋಳಾರ, ಕಾರ್ಯಕರ್ತರು, ಮೀನು ಮಾರುಕಟ್ಟೆಯ ವರ್ತಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post