ವಿಟ್ಲ: ಕೆಎಸ್ ಆರ್ ಟಿಸಿ ಸಿಬ್ಬಂದಿ ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿರುವ ಘಟನೆಯೊಂದು ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ.
ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ ವ್ಯಕ್ತಿ.
ಮಂಗಳೂರು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಟಿಸಿಯಾಗಿ ಕೆಲಸ ಮಾಡಿಕೊಂಡಿರುವ ಜನಾರ್ದನ ಅವರು ಎ.17 ರಂದು ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಿದ್ದರು.
ಎ.18ರಂದು ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು, ಮಧ್ಯಾಹ್ನದ ವೇಳೆ ಯಾವುದೋ ವಿಷ ಪದಾರ್ಥ ಸೇವಿಸಿ ಮನೆ ಹತ್ತಿರದ ಬಾವಿಗೆ ಹಾರಿದ್ದಾರೆ. ಇದನ್ನು ನೋಡಿದ ಅವರ ಪತ್ನಿ ರೇಣುಕಾ ಹಾಗೂ ಅವರ ಪುತ್ರ ಪ್ರಜ್ವಲ್ ಅವರು ಹಗ್ಗದ ಸಹಾಯದಿಂದ ಅವರನ್ನು ಮೇಲಕ್ಕೆತ್ತಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಿಸಿದ್ದರು.
ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಪ್ರಜ್ವಲ್ ದೂರು ನೀಡಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment