ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಅಮೆರಿಕ ಅಧ್ಯಕ್ಷ ಬೈಡನ್ ಜತೆ ಪ್ರಧಾನಿ ಮೋದಿ ವರ್ಚುವಲ್ ಸಭೆ

ಇಂದು ಅಮೆರಿಕ ಅಧ್ಯಕ್ಷ ಬೈಡನ್ ಜತೆ ಪ್ರಧಾನಿ ಮೋದಿ ವರ್ಚುವಲ್ ಸಭೆ

ಅಮೆರಿಕಾ: ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಇಂದು ವರ್ಚುವಲ್ ಸಭೆ ನಡೆಸಲಿದ್ದಾರೆ.



ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವುದು, ಹವಾಮಾನ ಬಿಕ್ಕಟ್ಟನ್ನು ಎದುರಿಸುವುದು, ದ್ವಿಪಕ್ಷೀಯ ಸಹಕಾರ, ದಕ್ಷಿಣ ಏಷ್ಯಾ, ಇಂಡೋ ಪೆಸಿಫಿಕ್ ಬೆಳವಣಿಗೆ, ಜಾಗತಿಕ ಆರ್ಥಿಕತೆಯನ್ನು ಬಲಪಡಿಸುವುದು ಮತ್ತು ಭದ್ರತೆಯನ್ನು ಹೆಚ್ಚಿಸಲು ಮುಕ್ತ, ನಿಯಮ-ಆಧಾರಿತ ಅಂತಾರಾಷ್ಟ್ರೀಯ ಆದೇಶವನ್ನು ಎತ್ತಿಹಿಡಿಯುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಇವರು ಸಂವಾದ ನಡೆಸಲಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಭಾನುವಾರ ಹೇಳಿದರು.


ಇಬ್ಬರೂ ನಾಯಕರು ಇಂಡೋ-ಪೆಸಿಫಿಕ್ ಬೆಳವಣಿಗೆ, ಮತ್ತು ಉತ್ತಮ-ಗುಣಮಟ್ಟದ ಮೂಲಸೌಕರ್ಯವನ್ನು ಒದಗಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ. ಅಲ್ಲದೇ ಉಕ್ರೇನ್ ವಿರುದ್ಧ ರಷ್ಯಾ ಯುದ್ಧದ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಜೆನ್ ಪ್ಸಾಕಿ ತಿಳಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم