ಉಡುಪಿ: ನಗರದ ಆದಿಉಡುಪಿ ಫ್ರೌಢಶಾಲೆಯಲ್ಲಿ ಪೊಲೀಸ್ ಪೇದೆ ತನ್ನ ರೈಫಲ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯನ್ನು ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ.
ರಾಜೇಶ್ ಅವರು ಆದಿಉಡುಪಿ ಶಾಲೆಯಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕಾವಲು ಕರ್ತವ್ಯದಲ್ಲಿದ್ದರು. ರಾತ್ರಿ ವೇಳೆಯಲ್ಲಿ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Post a Comment