ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯ

18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯ



 ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯವಾಗಿದೆ. ಇದು ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು, ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರು ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು. 18 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣವಾಗಿದ್ದಲ್ಲಿ, ಈ ಡೋಸ್ ಪಡೆಯಬಹುದು ಎಂದು ಸಚಿವರು ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم