ಮಂಗಳೂರು : ಮಂಗಳೂರು- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಪೆಟ್ರೋಲ್ ಪಂಪ್ ಎದುರು ಬುಧವಾರ ರಾತ್ರಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಶೃಂಗೇರಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಸೂರಲ್ಪಾಡಿ ಬಳಿ ಅಪಘಾತಕ್ಕೀಡಾಗಿದೆ.
ಭಾರೀ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್‌ನಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿದ್ದರು.
ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಇತರ ಐದಾರು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಜ್ಪೆ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ತುರ್ತು ಪರಿಹಾರ ಕಾರ್ಯ ಕೈಗೊಂಡಿದ್ದಾರೆ.
إرسال تعليق