ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶ್ರೀಲಂಕಾದಲ್ಲಿ ಆರ್ಥಿಕತೆ ಕುಸಿತ: ತುರ್ತುಪರಿಸ್ಥಿತಿ ಘೋಷಣೆ

ಶ್ರೀಲಂಕಾದಲ್ಲಿ ಆರ್ಥಿಕತೆ ಕುಸಿತ: ತುರ್ತುಪರಿಸ್ಥಿತಿ ಘೋಷಣೆ

ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕತೆ ಪಾತಾಳಕ್ಕೆ ಇಳಿದಿದ್ದು, ಸರ್ಕಾರದ ವಿರುದ್ಧ ನಾಗರಿಕರು ಬೀದಿಗಿಳಿದಿದ್ದಾರೆ. ಈ ಬೆನ್ನಲ್ಲೇ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸೆ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.



ತುರ್ತು ಪರಿಸ್ಥಿತಿ ಘೋಷಣೆ ಮಾಡುವುದರ ಜೊತೆಗೆ ಕೆಲವೊಂದು ಸಾರ್ವಜನಿಕ ಭದ್ರತೆಯ ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಿದ್ದಾರೆ. ಈ ಸುಗ್ರೀವಾಜ್ಞೆಗಳು ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ಸಂರಕ್ಷಣೆ, ದಂಗೆ, ಗಲಭೆ ಅಥವಾ ನಾಗರಿಕ ಗಲಭೆಯನ್ನು ನಿಗ್ರಹಿಸಲು ಮತ್ತು ಅನೇಕ ಕಾನೂನುಗಳನ್ನು ಮಾಡಲು ಅಧಿಕಾರ ನೀಡುತ್ತದೆ.

ಭಾನುವಾರ ಶ್ರೀಲಂಕಾದಾದ್ಯಂತ ಸರ್ಕಾರದ ವಿರುದ್ಧ ಸಾರ್ವಜನಿಕ ಪ್ರತಿಭಟನೆಗೆ ಕರೆ ನೀಡಲಾಗಿದೆ. ಗುರುವಾರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪ್ರತಿಭಟನಾಕಾರರು ಭಾಗವಹಿಸಿದ್ದರು




0 تعليقات

إرسال تعليق

Post a Comment (0)

أحدث أقدم