ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ಬಂಧನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ಬಂಧನ

 


ಶಿರಸಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ‌ಯೊಂದರ ಮುಖ್ಯ ಶಿಕ್ಷಕನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಸುರೇಶ ಪರಮೇಶ್ವರ ಹೆಗಡೆ (53) ಬಂಧಿತ ಆರೋಪಿ.


ಶಿಕ್ಷಕ ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. 


ವಿದ್ಯಾರ್ಥಿನಿಯ ಪಾಲಕರು ಶಿಕ್ಷಕನ ವಿರುದ್ಧ ಶಿರಸಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿ, ಪಿಎಸ್‌ಐ ಈರಯ್ಯ ತನಿಖೆ ನಡೆಸುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post