ತುಮಕೂರು: ಶಿರಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಸಚಿವ ಟಿ.ಬಿ ಜಯಚಂದ್ರ ಕಾರು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆಯೊಂದು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಸುಮಾರು 11.30ಕ್ಕೆ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರ ಕಾರು, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ಘಟನೆಯಲ್ಲಿ ಟಿ.ಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಲ್ಲಿ ಗನ್ ಮ್ಯಾನ್ ಹಾಗೂ ಕಾರು ಚಾಲಕ ಕೂಡ ಅಪಾಯದಿಂದ ಪಾರಾಗಿದ್ದಾರೆ.
Post a Comment