ಮಂಗಳೂರು: ಎಂಎಸ್ಇಝಡ್ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಸಾವನ್ನಪ್ಪಿದ್ದು, ಮೂರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಭಾನುವಾರ ರಾತ್ರಿ ಈ ದುರಂತ ಸಂಭವಿಸಿದೆ.
ಪಶ್ಚಿಮ ಬಂಗಾಳದ ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್, ಸಮೀರುಲ್ಲಾ ಇಸ್ಲಾಂ ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳ ಮೂಲದವರಾದ ಉಳಿದವರು ಗಂಭೀರವಾಗಿ ಅಸ್ವಸ್ಥರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮೀನಿನ ಫ್ಯಾಕ್ಟರಿಯಲ್ಲಿ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್ನ್ನು ಶುಚಿಗೊಳಿಸಲು ಕೆಳಗಿಳಿದಿದ್ದು, ಈ ಸಂದರ್ಭದಲ್ಲಿ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ಇತರ ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡಾ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
إرسال تعليق