ಕಟೀಲು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಶನಿವಾರ ಸಂಜೆ ಭೇಟಿ ನೀಡಿ ವಿಶೇಷ ಸೇವೆ ಸಲ್ಲಿಸಿದರು.
ದೇವಿಗೆ ಮೂರು ಸೀರೆಗಳನ್ನು ಅರ್ಪಿಸಿದರು. ಬಳಿಕ ನಂದಿನಿ ನದಿ, ದೇವಸ್ಥಾನದ ಗೋಶಾಲೆಗೆ ಭೇಟಿ ನೀಡಿ ಕಪಿಲೆ ದನಕ್ಕೆ ಹಣ್ಣು, ಹಿಂಡಿ ನೀಡಿದರು.
ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ಆನುವಂಶಿಕ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಆನುವಂಶಿಕ ಮೊಕ್ತೇಸರ ಹಾಗೂ ಆನುವಂಶಿಕ ಅರ್ಚಕ ವಾಸುದೇವ ಆಸ್ರಣ್ಣ ಸ್ವಾಗತಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment