ಬೆಂಗಳೂರು: ಬುಧವಾರ ನಗರದಲ್ಲಿ ಸುರಿದ ಮಳೆಗೆ ಯುವಕ ಸಾವನ್ನಪ್ಪಿದ ಘಟನೆಯೊಂದು ಬೆಂಗಳೂರಿನ ದೀಪಾಂಜಲಿ ನಗರದಲ್ಲಿ ನಡೆದಿದೆ.
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ವಸಂತ (21) ಮೃತ ದುರ್ದೈವಿ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಸಂಜೆ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು, ಇದರಿಂದಾಗಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದೆ.
ವೈರ್ ನಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಸಂತ್ ತೀವ್ರ ಅಸ್ವಸ್ಥನಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق