ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 21 ವರ್ಷದ ವಿದ್ಯಾರ್ಥಿಯ ಹತ್ಯೆ

21 ವರ್ಷದ ವಿದ್ಯಾರ್ಥಿಯ ಹತ್ಯೆ

 


ಟೊರಂಟೊ: ಕೆನಡಾದ ಟೊರೆಂಟೊದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ದುಷ್ಕರ್ಮಿ ಗುಂಡಿಟ್ಟು ಹತ್ಯೆ ಮಾಡಿದ್ದಾನೆ.

ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ.


ಟೊರಂಟೊದ ಶೇರ್ ಬಾರ್ನೆ ಸಬ್ ವೇ ರೈಲು ನಿಲ್ದಾಣದ ಬಳಿ ಗುರುವಾರ ಸಂಜೆ ತೆರಳುತ್ತಿದ್ದಾಗ ಮುಸುಕುದಾರಿಯೊಬ್ಬ ಮನಸೋ ಇಚ್ಚೆ ಗುಂಡು ಹಾರಿಸಿದ್ದಾನೆ.

ಬಳಿಕ ಕಾರ್ತಿಕ್ ಅವರನ್ನು ರೈಲು ನಿಲ್ದಾಣದ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಈ ಬಗ್ಗೆ ಟೊರಂಟೊ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



0 تعليقات

إرسال تعليق

Post a Comment (0)

أحدث أقدم