ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ ಮಳೆ ಯಾಗುತ್ತಿದ್ದು, ಇನ್ನು ಒಂದು ವಾರ ಕಾಲ ಕರಾವಳಿ ಕರ್ನಾಟಕದ ಭಾಗದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು,ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಸೋಮವಾರ ನಗರದಲ್ಲಿ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 34.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
Post a Comment