ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತಂದೆ ಡೇಟಾ ಪ್ಯಾಕ್ ರೀಚಾರ್ಜ್ ಮಾಡಿಲ್ಲವೆಂದು ಮಗ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ತಂದೆ ಡೇಟಾ ಪ್ಯಾಕ್ ರೀಚಾರ್ಜ್ ಮಾಡಿಲ್ಲವೆಂದು ಮಗ ನೇಣು ಬಿಗಿದು ಆತ್ಮಹತ್ಯೆಗೆ ಶರಣು

 


ಮಧ್ಯಪ್ರದೇಶ : ತನ್ನ ತಂದೆ ಮೊಬೈಲಿಗೆ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿಲ್ಲವೆಂಬ ಸಣ್ಣ ವಿಚಾರಕ್ಕೆ 14 ವರ್ಷದ ಬಾಲಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.


ಬಾಲಕನ ತಂದೆ ದಿನಗೂಲಿ ಕಾರ್ಮಿಕರಾಗಿದ್ದು, ಹಣಕಾಸಿನ ಮುಗ್ಗಟ್ಟಿನಿಂದ ಬಳಲುತ್ತಿದ್ದರು ಎನ್ನಲಾಗಿದೆ.


ಹಿನ್ನಲೆ ಕಳೆದ ಕೆಲವು ದಿನಗಳಿಂದ ಮಗನ ಮೊಬೈಲ್ ಫೋನಿಗೆ ಡೇಟಾ ಪ್ಯಾಕ್ ರಿಚಾರ್ಜ್ ಮಾಡಿಸಿರಲಿಲ್ಲವೆನ್ನಲಾಗಿದೆ. ಇದರಿಂದ ಬೇಸರಗೊಂಡ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.


ಅಲ್ಲದೇ ಬಾಲಕ ಮೊಬೈಲ್ ಗೇಮ್ಸ್ ಗೆ ದಾಸನಾಗಿದ್ದು, ಕಳೆದ ಕೆಲವು ದಿನಗಳಿಂದ ಈ ಗೇಮ್ ಆಡದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಎನ್ನಲಾಗಿದೆ.

ಈ ಎಲ್ಲಾ ಕಾರಣಗಳಿಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವುದಾಗಿ ಜಬಲ್ಪುರ ಜಿಲ್ಲಾ ರಕ್ಷಣಾಧಿಕಾರಿ ಅಲೋಕ್ ಶರ್ಮಾ ಮಾಹಿತಿ ನೀಡಿದ್ದಾರೆ.


0 تعليقات

إرسال تعليق

Post a Comment (0)

أحدث أقدم