ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ವರನಟ ಡಾ. ರಾಜ್‍ಕುಮಾರ್ ಅವರ 93ನೇ ಹುಟ್ಟು ಹಬ್ಬ

ಇಂದು ವರನಟ ಡಾ. ರಾಜ್‍ಕುಮಾರ್ ಅವರ 93ನೇ ಹುಟ್ಟು ಹಬ್ಬ

 


ಬೆಂಗಳೂರು: ಇಂದು (ಏಪ್ರಿಲ್ 24) ವರನಟ, ಗಾನ ಗಂಧರ್ವ, ಪದ್ಮ ಭೂಷಣ, ನಟಸಾರ್ವಭೌಮ ಡಾ.ರಾಜ್ ಕುಮಾರ್ ಅವರ 93ನೇ ಹುಟ್ಟುಹಬ್ಬ.

ಚಾಮರಾಜನಗರ ಜಿಲ್ಲೆ ಗಡಿಭಾಗದಲ್ಲಿರುವ ಗಾಜನೂರಿನಲ್ಲಿ 1929ರ ಏಪ್ರಿಲ್ 24ರಂದು ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿ ಪುತ್ರನಾಗಿ ಮುತ್ತುರಾಜ್ ಜನಿಸಿ ಕನ್ನಡ ಚಿತ್ರರಂಗ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ.

ಇಂದು ಅವರ 93ನೇ ಹುಟ್ಟಿದ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋ ದಲ್ಲಿರುವ ಡಾ.ರಾಜ್ ಸ್ಮಾರಕಕ್ಕೆ ಅವರ ಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು ಆಗಮಿಸಿ ಬೆಳಗ್ಗೆಯೇ ಪೂಜೆ ಸಲ್ಲಿಸಿದ್ದಾರೆ.

ಸಾವಿರಾರು ಅಭಿಮಾನಿಗಳು ಡಾ.ರಾಜ್ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಂತರ ಡಾ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರ ಬಗ್ಗೆ ಬರೆದಿರುವ ಪುಸ್ತಕ ಬಿಡುಗಡೆ ಮಾಡಿದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post