ಮಂಗಳೂರು: ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ಸಮಾಜಸೇವಕಿ ಮಾಲತಿ ಶೆಟ್ಟಿ ಮಾಣೂರುರವರಿಗೆ ಗ್ರಾಮಾಂತರ ಬುದ್ಧಿಜೀವಿಗಳ ಬಳಗ ಹಾಗೂ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಪರಿಷತ್ 38ನೇಯ ವಾರ್ಷಿಕೋತ್ಸವದ ಅಂಗವಾಗಿ ನೀಡುವ 2022 ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದು ಪತ್ರಿಕೋದ್ಯಮ, ಕನ್ನಡ ನಾಡು- ನುಡಿಗೆ ನೀಡಿರುವ ಅಪಾರ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಏಪ್ರಿಲ್ 17ರಂದು ಮೈಸೂರಿನ ರೋಟರಿ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಾ. ಭೇರ್ಯರಾಮ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment