ಕಸಾಪ ಮಂಗಳೂರು ಘಟಕ, ಸರಕಾರಿ ಪ್ರೌಢಶಾಲೆ ಅತ್ತಾವರ ಸಹಯೋಗ
ಮಂಗಳೂರು: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಸರಕಾರಿ ಪ್ರೌಢಶಾಲೆ ಅತ್ತಾವರ ಸಹಯೋಗದಲ್ಲಿ ಕವನ ರಚನಾ ಕಮ್ಮಟ ಏಪ್ರಿಲ್ 5ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಸರಕಾರಿ ಪ್ರೌಢಶಾಲೆ ಅತ್ತಾವರದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಕುಮಾರ್ ಎನ್.ಆರ್ ಉದ್ಘಾಟಿಸಲಿದ್ದಾರೆ. ಮಂಗಳೂರು ತಾಲೂಕು ಕಸಾಪ ಘಟಕ ಅಧ್ಯಕ್ಷರಾದ ಡಾ. ಮಂಜುನಾಥ ಎಸ್. ರೇವಣ್ಕರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಥನ ಕವನದ ಬಗ್ಗೆ ಡಾ. ಮೀನಾಕ್ಷಿ ರಾಮಚಂದ್ರ, ಮಕ್ಕಳ ಕವನದ ಬಗ್ಗೆ ರಘು ಇಡ್ಕಿದು, ಚುಟುಕುಗಳ ಬಗ್ಗೆ ಎನ್. ಸುಬ್ರಾಯ ಭಟ್ ಅವರು ರಚನಾ ಮಾಹಿತಿ ನೀಡಲಿದ್ದಾರೆ.ಶ್ರೀಮತಿ ರತ್ನಾವತಿ ಜೆ. ಬೈಕಾಡಿ ಅವರಿಂದ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮವಿದೆ.
ಕಸಾಪ ಮಂಗಳೂರು ಘಟಕದ ಗೌರವ ಕಾರ್ಯದರ್ಶಿಗಳಾದ ಡಾ. ಮುರಲೀ ಮೋಹನ ಚೂಂತಾರು, ಗಣೇಶ್ ಪ್ರಸಾದ್ ಜೀ, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق