ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಯುಗಾದಿ ಹಬ್ಬದ ದಿನವೇ ವಾಹನ ಸವಾರರಿಗೆ ಬಿಗ್ ಶಾಕ್; ಪೆಟ್ರೋಲ್ ಡೀಸೆಲ್ ದರ ಏರಿಕೆ

ಯುಗಾದಿ ಹಬ್ಬದ ದಿನವೇ ವಾಹನ ಸವಾರರಿಗೆ ಬಿಗ್ ಶಾಕ್; ಪೆಟ್ರೋಲ್ ಡೀಸೆಲ್ ದರ ಏರಿಕೆ

 




ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನವೂ ಏರಿಕೆಯಾಗುತ್ತಿದ್ದು, ನಿನ್ನೆ ಬಿಡುವಿನ ನಂತರ ಇಂದು ಮತ್ತೆ ದರ ಪರಿಷ್ಕರಣೆ ಮಾಡಲಾಗಿದೆ.


ದೆಹಲಿಯಲ್ಲಿ ಇಂದು ಪೆಟ್ರೋಲ್ ಬೆಲೆ 80 ಪೈಸೆ ಏರಿಕೆ ಮಾಡಲಾಗಿದ್ದು, 102.61 ರೂ.ಗೆ ತಲುಪಿದೆ. ಡೀಸೆಲ್ ದರ ಕೂಡ 80 ಪೈಸೆ ಏರಿಕೆಯಾಗಿದ್ದು 93.87 ರೂ.ಗೆ ತಲುಪಿದೆ.


ಕೊಲ್ಕತ್ತಾದಲ್ಲಿ ಪೆಟ್ರೋಲ್ 84 ಪೈಸೆ, ಡೀಸೆಲ್ 80 ಪೈಸೆ ಹೆಚ್ಚಳವಾಗಿದ್ದು, ಕ್ರಮವಾಗಿ 112.19 ರೂ., 97.02 ರೂ.ಗೆ ತಲುಪಿದೆ.


ತೆರಿಗೆ ಮತ್ತು ಸಾಗಣೆ ವೆಚ್ಚ ಸೇರಿ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ವ್ಯತ್ಯಾಸವಾಗುತ್ತದೆ


12 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಸುಮಾರು 7.50 ರೂ.ನಷ್ಟು ಹೆಚ್ಚಳವಾಗಿದೆ.

0 Comments

Post a Comment

Post a Comment (0)

Previous Post Next Post