ಚಾಮರಾಜನಗರ: ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕೆಲಸ ಮಾಡಿಕೊಂಡಿದ್ದ ಅವರು ರಸ್ತೆ ಅಪಘಾತ ದಲ್ಲಿ ಮೃತಪಟ್ಟರು.
ಸಂತೇಮರಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಸ್ಟೇಬಲ್, ಪ್ರಸಾದ್(34) ಸೋಮವಾರ ರಾತ್ರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕರ್ತವ್ಯ ನಿಮಿತ್ತ ಕೆಂಪನಪುರಕ್ಕೆ ಪ್ರಸಾದ್ ಮತ್ತು ಎಎಸ್ ಐ ರಾಜು ಬೈಕ್ ನಲ್ಲಿ ಹೋಗಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದಿದೆ.
ಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಕೆಲ ವರ್ಷಗಳ ಹಿಂದೆ ನಾಗವಳ್ಳಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು. ಮಗು ಜನಿಸಿ ಒಂದು ತಿಂಗಳಾಗಿತ್ತು.
ಪ್ರಸಾದ್ ಜೊತೆ ಬೈಕ್ ನಲ್ಲಿ ಹಿಂದೆ ಕುಳಿತಿದ್ದ ಎಎಸ್‌ಐ ರಾಜು ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಕಾರಿನ ಮಾಲೀಕನಿಗೂ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق