ಮಂಗಳೂರು: ಖ್ಯಾತ ಯಕ್ಷಗಾನ ಭಾಗವತ ಬಲಿಪ ಪ್ರಸಾದ ಭಟ್ (45) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಸಂಜೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಮಾರೂರು ನಿವಾಸಿಯಾಗಿದ್ದ ಬಲಿಪ ಪ್ರಸಾದ ಅವರು ಕಟೀಲು ಮೇಳದ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರ ಪುತ್ರರಾಗಿದ್ದಾರೆ.
ಇವರು ತಂದೆ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق