ಮಂಗಳೂರು: ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಹಾಗೂ ಕನ್ನಡ ವಿಭಾಗ ಸಂತ ಆಗ್ನೆಸ್ ಸ್ವಾಯತ್ತ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರು ನಗರದ ಹೆಸರಾಂತ ಜವಳಿ ಉದ್ಯಮಿ ದಿ. ಎ. ಆರ್. ಡಿ’ಸೋಜಾರ ಹೆಸರಿನ ದತ್ತಿ ಉಪನ್ಯಾಸ ಕಾರ್ಯಕ್ರಮವು ಮೇ 31 ರಂದು ಸಂತ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
‘ಕನ್ನಡ ಸಾಹಿತ್ಯಕ್ಕೆ ಕ್ರೈಸ್ತರ ಕೊಡುಗೆ’ ಎಂಬ ವಿಷಯದ ಬಗ್ಗೆ ಖ್ಯಾತ ವಿದ್ವಾಂಸ ಶ್ರೀ ಬೆನೆಟ್ ಜಿ ಅಮ್ಮನ್ನರು ಸವಿಸ್ತಾರವಾದ ಮೌಕಿಕ ಉಪನ್ಯಾಸವನ್ನಿತ್ತರು. ಕಾರ್ಯಕ್ರಮದಲ್ಲಿ ಎ. ಆರ್.ಡಿ ಸೋಜಾ ರ ಪೌತ್ರರೂ ಖ್ಯಾತ ಉದ್ಯಮಿಯೂ ಆದ ಶ್ರೀ ಟೆರೆನ್ಸ್ ಡಿ’ಸೋಜಾ ಹಾಗೂ ಅವರ ಪತ್ನಿ ಶ್ರೀಮತಿ ಲೊಲಿಟಾ ಡಿ’ಸೋಜಾ ರವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಕಾರ್ಯಕ್ರಮವನ್ನು ಸಂತ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಸಿ| ಡಾ.ಎಂ ವೆನಿಸ್ಸಾ ಎ.ಸಿ ಯವರು ಉದ್ಘಾಟಿಸಿದರು. ಮಂಗಳೂರು ತಾಊಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಂಜುನಾಥ ಎಸ್. ರೇವಣಕರರು ಅಧ್ಯಕ್ಷತೆ ವಹಿಸಿದ್ದರು.
ಘಟಕದ ಗೌರವ ಕಾರ್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಸ್ವಾಗತಿಸಿದರು. ಘಟಕದ ಪದಾಧಿಕಾರಿ ಡಾ. ಮೀನಾಕ್ಷಿ ರಾಮಚಂದ್ರ ಪ್ರಸ್ತಾವನೆ ಗೈದು, ಸಂತ ಆಗ್ನೆಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಶ್ರೀಮತಿ ಶೈಲಜಾ ರವರು ವಂದನಾರ್ಪಣೆಗೈದರು. ಘಟಕದ ಗೌರವ ಕಾರ್ಯದರ್ಶಿ ಶ್ರೀ ಗಣೇಶ್ ಪ್ರಸಾದ್‍ಜೀ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
Post a Comment