ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸ್ಕೂಟರ್ ನಡುವೆ ಅಪಘಾತ; ಯುವತಿ ಸಾವು

ಸ್ಕೂಟರ್ ನಡುವೆ ಅಪಘಾತ; ಯುವತಿ ಸಾವು

 


ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಎರಡು ಸ್ಕೂಟರ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿ ಮೃತಪಟ್ಟಿದ್ದಾರೆ.

ಪೊಲೀಸ್ ಬಡಾವಣೆ ಮೂರನೇ ಹಂತದ ನಿವಾಸಿ , ಬಿಎಸ್‌ಎನ್‌ಎಲ್ ನಿವೃತ್ತ ಉದ್ಯೋಗಿ ಲಕ್ಷ್ಮೀಪತಿ ಎಂಬವರ ಮಗಳು ಲತಾ (24) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಖಾಸಗಿ ಕಂಪನಿಯೊಂದರಲ್ಲಿ ಆರ್ಕಿಟೆಕ್ಚರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕೆಲಸಕ್ಕೆ ಹೋಗುತ್ತಿದ್ದ ವೇಳೆ ರಿಂಗ್ ರಸ್ತೆ ದಾಟುತ್ತಿದ್ದ ವೇಳೆ ಬಂಡಿಪಾಳ್ಯ ಕಡೆಯಿಂದ ವೇಗವಾಗಿ ಬಂದ ಸ್ಕೂಟರ್ ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದ ಕೆಳಕ್ಕೆ ಬಿದ್ದ ಲತಾ ಅವರ ತಲೆಯ ಭಾಗಕ್ಕೆ ತೀವ್ರವಾದ ಪೆಟ್ಟಾಗಿದೆ. ಈ ವೇಳೆ ಸಾರ್ವಜನಿಕರು ತಕ್ಷಣ ಸಮೀಪದ ನಿರ್ಮಲಾ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಅಷ್ಟರ ವೇಳೆಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸಿದ್ದಾರ್ಥನಗರ ಸಂಚಾರಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನಟರಾಜ್ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم