ಉಳ್ಳಾಲ: ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ದ.ಕ ಜಿಲ್ಲಾಡಳಿತ ಮತ್ತು ಉಳ್ಳಾಲ ತಾಲೂಕು ಆಡಳಿತವು ಮೇ.28 ರಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ‘ಅಮೃತ ಭಾರತಿಗೆ ಕನ್ನಡದ ಆರತಿ’ ಎಂಬ ಕಾರ್ಯಕ್ರಮವನ್ನು ಕೊಲ್ಯದ ಕುಲಾಲ ಸಭಾಭವನದಲ್ಲಿ ಹಮ್ಮಿಕೊಂಡಿದೆ.
ಬೆಳಗ್ಗೆ 10.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಶಾಸಕರು, ವಿರೋಧ ಪಕ್ಷದ ಉಪನಾಯಕರಾದ ಯು.ಟಿ ಖಾದರ್ ಭಾಗವಹಿಸಲಿದ್ದಾರೆ. ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಮುಖ್ಯ ಭಾಷಣ ಮಾಡಲಿದ್ದಾರೆ.
ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ. ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪ್ ಸಿಂಹ ನಾಯಕ್, ಬಿ.ಎಂ ಫಾರೂಕ್, ಕೆ.ಹರೀಶ್ ಕುಮಾರ್. ಆಯನೂರು ಮಂಜುನಾಥ್, ಎಸ್ ಎಲ್ ಭೋಜೇಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಬೆಂಗಳೂರು ಇದರ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಧನಂಜಯ ಕುಂಬ್ಳೆ ಇವರು ಭಾಗವಹಿಸಲಿದ್ದಾರೆ. ಉಳ್ಳಾಲ ನಗರ ಸಭೆಯ ಅಧ್ಯಕ್ಷರಾದ ಚಿತ್ರಕಲಾ ಕೆ. ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಕುರಿತು ಗುರುವಾರ ಸಿದ್ಧತಾ ಸಭೆ ಉಳ್ಳಾಲ ತಹಶೀಲ್ದಾರ್ ಟಿ.ಜಿ ಗುರುಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಉಳ್ಳಾಲ ನಗರಸಭೆಯ ಪೌರಾಯುಕ್ತ ರಾಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಕೆ.ಎಸ್, ಮಂಗಳೂರು ಸಮಗ್ರ ಬಾಲವಿಕಾಸ ಯೋಜನಾಧಿಕಾರಿ ಶೈಲಜಾ ಮತ್ತಿತರರರು ಭಾಗವಹಿಸಿದ್ದರು.
ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ:
ಬೆಳಗ್ಗೆ 8.30 ಕ್ಕೆ ಉಳ್ಳಾಲದಲ್ಲಿರುವ ಅಬ್ಬಕ್ಕ ರಾಣಿ ಪ್ರತಿಮೆಗೆ ಗಣ್ಯರ ಮಾಲಾರ್ಪಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ. ಬಳಿಕ ತೊಕ್ಕೊಟ್ಟು ವೀರಮಾರುತಿ ವ್ಯಾಯಾಮ ಶಾಲೆಯಿಂದ ಕೊಲ್ಯ ಕುಲಾ ಸಭಾಭವನದ ತನಕ ವಿವಿಧ ಸಾಂಸ್ಕೃತಿಕ ತಂಡಗಳು, ಅಬ್ಬಕ್ಕರಾಣಿಯ ಸ್ತಬ್ಧಚಿತ್ರ ಸಹಿತ ಸಾರ್ವಜನಿಕ ಶೋಭಾಯಾತ್ರೆ ನಡೆಯಲಿದೆ. ಕೊಲ್ಯ ಸಭಾಭವನದಲ್ಲಿ ಬೆಳಗ್ಗೆ 9.30 ರಿಂದ ಹೇಮಚಂದ್ರ ಕೈರಂಗಳ ಮತ್ತು ಬಳಗದವರಿಂದ ದೇಶ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮವಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ತಹಶೀಲ್ದಾರ್ ಟಿ. ಜಿ ಗುರುಪ್ರಸಾದ್ ವಿನಂತಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق